ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ.  ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಗಾಜಾ ಪಟ್ಟಿಯಿಂದ ಆರಂಭವಾದ ಸಂಘರ್ಷ ವಿಶ್ವವೇ ಆತಂಕಕ್ಕೆ ಒಳಗಾಗುವಂತೆ ಮಾಡಿದ್ದಲ್ಲದೆ. ತನಗೆ ಎದುರಾಗಿ ಯಾರೇ ನಿಂತರೂ ಹೊಡೆದುರುಳಿಸುತ್ತೇನೆ ಎಂದು ಇಸ್ರೇಲ್ ಮುನ್ನುಗ್ಗುತ್ತಿದೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ನಾಯಕನನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಶತ್ರುಗಳ ಗುಂಪಿನ ನಾಯಕನನ್ನು ಕೊಂದು ಹಾಕಿತ್ತು. ಲೆಬನಾನ್ ಮೇಲಿನ ದಾಳಿಯಿಂದ ಕೆರಳಿರುವ ಇರಾನ್ ಇದೀಗ ಇಸ್ರೇಲ್ ಮೇಲೆ ಮುಗಿಬಿದ್ದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಟೆಲ್ ಅವೀವ್‌ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಇಸ್ರೇಲ್‌ ತನ್ನ ದೇಶದ ನಾಗರಿಕರಿಗೆ ತಿಳಿಸಿದೆ. ಭಾರತೀಯ ಕಾಲಮಾನ ರಾತ್ರಿ 10:08ರ ಸುಮಾರಿಗೆ ಇಸ್ರೇಲ್‌ ರಕ್ಷಣಾಪಡೆಗನ್ನು ಗುರಿಯಾಗಿಸಿ ಇರಾನ್‌ ರಾಕೆಟ್‌ ದಾಳಿ ನಡೆಸಿದೆ ಎಂದು ಇಸ್ರೇಲಿ ವಿದೇಶಾಂಗ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

Leave a Comment

Your email address will not be published. Required fields are marked *