ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Ad Widget ... ..

ಸೆ.23 ರಂದು ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು ಎನ್ನಲಾಗಿದೆ.

Ad Widget

ಕುಟುಂಬಸ್ಥರಿಗೆ ಅ.1 ರಂದು ಜಾಮೀನು ಶೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ.ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಅ.2 ರಂದು ಎ-16 ಆರೋಪಿ , 2-15 , 2-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Leave a Comment

Your email address will not be published. Required fields are marked *