ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎಸ್ ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
ವಿಶೇಷ ತನಿಖಾ ತಂಡದಲ್ಲಿ ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಹಿರಿಯ ಅಧಿಕಾರಿಗಳು ಇರಲಿದ್ದಾರೆ ಎಂದು ನ್ಯಾಯಾಲಯವು ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ಈ ವಿಷಯದಲ್ಲಿ ರಾಜಕೀಯ ಬಯಸುವುದಿಲ್ಲ, ಇದು ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ಹೇಳಿದೆ.
ಜಗನ್ ಮೋಹನ್ ರೆಡ್ಡಿ ಆಡಳಿತದಲ್ಲಿ ತಿರುಪತಿಯಲ್ಲಿ ಪ್ರಸಾದವಾಗಿ ನೀಡುತ್ತಿದ್ದ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ಜಗನ್ ಮೋಹನ್ ರೆಡ್ಡಿ ಮತ್ತು ನಾಯ್ಡು ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು.