ಸಮಗ್ರನ್ಯೂಸ್: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 55 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಹರಿಯಾಣದಲ್ಲಿ ಪ್ರಮುಖ ಪಕ್ಷಗಳಾಗಿವೆ. ಜೆಜೆಪಿಯು ಆಜಾದ್ ಸಮಾಜ ಪಕ್ಷದೊಂದಿಗೆ (ಕಾನ್ಶಿ ರಾಮ್) ಮೈತ್ರಿ ಮಾಡಿಕೊಂಡಿದ್ದರೆ, ಐಎನ್‌ಎಲ್‌ಡಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.
ಇತ್ತ ಜಮ್ಮು& ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಜಮ್ಮು&ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 90 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಮೈತ್ರಿಕೂಟ 45 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಮ್ಯಾಜಿಕ್ ನಂಬರ್ ದಾಟಿದೆ.