ದ.ಕ ದಲ್ಲಿ ಈ ಬಾರಿ ಸ್ವಾತಂತ್ರ್ಯ ಆಚರಣೆಗಿಲ್ಲ ಸ್ವಾತಂತ್ರ್ಯ| ವೀಕೆಂಡ್ ಕರ್ಪ್ಯೂ ‌ನಡುವೆ ಸರಳ ಆಚರಣೆಗೆ ಸೂಚನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಆತಂಕ ಮನೆ ಮಾಡಿದ್ದು, 75 ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಕತ್ತರಿ ಬಿದ್ದಿದೆ. ಜಿಲ್ಲಾದ್ಯಂತ ಆ.14 ಮತ್ತು 15 ರಂದು ವೀಕೆಂಡ್ ಕರ್ಪ್ಯೂ ಹೇರಿರುವ ಕಾರಣ ಸಾರ್ವಜನಿಕ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ.

Ad Widget ... ..

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಡಳಿತ ಸೂಚಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಕೇವಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧ್ವಜಾರೋಹಣ ನೆರವೇರಿಸಲು ಸೂಚಿಸಿದ್ದು, ಸಾರ್ವಜನಿಕರ ಭಾಗವಹಿಸುವಿಕೆ ನಿಷೇಧಿಸಲಾಗಿದೆ.

Ad Widget

ಶನಿವಾರ ನಡೆಯಲಿದ್ದ ಮಂಗಳೂರು ವಿ.ವಿ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ಜಿಲ್ಲೆಯಲ್ಲಿ ‌ವಾರಾಂತ್ಯ ಸಾರ್ವಜನಿಕ ಓಡಾಟಕ್ಕೆ ಕಡಿವಾಣ ಹಾಕಲಾಗಿದೆ. ಸರ್ಕಾರಿ ಕಚೇರಿಗಳು, ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಮೊಟಕುಗೊಳಿಸಲಾಗಿದೆ. ಜನರ ಓಡಾಟದ ಮೇಲೆ ನಿಗಾ ಇರಿಸಲು ಪೊಲೀಸರಿಗೆ ಸೂಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Leave a Comment

Your email address will not be published. Required fields are marked *