ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು

ಸಮಗ್ರ ನ್ಯೂಸ್: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

Ad Widget ... ..

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು.

Ad Widget

ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಇಂದು(ಅ.18) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *