ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ರಾಜೀನಾಮೆ| ಸ್ವತಂತ್ರ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಸ್ಪರ್ಧೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ.

Ad Widget ... ..

ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು ಸಭಾಪತಿ ಹೊರಟ್ಟಿ ಅವರ ಭೇಟಿಗೆ ತೆರಳಿದ್ದಾರೆ.

Ad Widget

ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಚಿಸಿರುವ ಸಿಪಿ ಯೋಗೇಶ್ವರ್‌, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆ ಮೂಲಕ ದೋಸ್ತಿ ನಾಯಕರಿಗೆ ಸಿಪಿವೈ ಸಡ್ಡು ಹೊಡೆದಿದ್ದಾರೆ.

Leave a Comment

Your email address will not be published. Required fields are marked *