Ad Widget .

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮುಂದಿನ ಎರಡು ದಿನಗಳು ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅ.22ರಂದು ಉಡುಪಿ, ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Ad Widget . Ad Widget . Ad Widget .

ಇನ್ನು ಅ.23ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಅ.24 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲೂ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ.

Leave a Comment

Your email address will not be published. Required fields are marked *