ಸಮಗ್ರ ನ್ಯೂಸ್:ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಅ.23 ರಂದು ಬಿಡುಗಡೆ ಮಾಡಲಾಗುವುದು.ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿದೆ.
ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಪ್ರಮುಖರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಇದೇ ಅ.16 ರಂದು ಆಗ್ರಹಿಸಲಾಗಿತ್ತು.
ಮೋದಿ ಸರ್ಕಾರದ ತ್ವರಿತ ನಿರ್ಧಾರ ಹಾಗೂ ಕಾರ್ಯರೂಪಕ್ಕೆ ಇದು ಕೈಗನ್ನಡಿ.ಇದು ಭಾರತ ಸರ್ಕಾರವು ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ.ಈ ತ್ವರಿತ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ಮೋದಿ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಕೇಂದ್ರ ಸಂವಹನಾ ಸಚಿವಾಲಯಕ್ಕೆ ಹೃತ್ತೂರ್ವಕ ಧನ್ಯವಾದಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.