ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

Ad Widget ... ..

ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

Ad Widget

ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅ.21ರಂದು ಚುನಾವಣೆ ನಡೆದಿತ್ತು.

Leave a Comment

Your email address will not be published. Required fields are marked *