ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ.ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು.
ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ ಒಳಗಾದಂತ 98 ಅಪರಾಧಿಗಳಿಗೆ ತಲಾ 5 ಸಾವಿರ ದಂಡವನ್ನು ವಿಧಿಸಿದ್ದಾರೆ.
2014ರ ಆಗಸ್ಟ್ 28 ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು 101 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದ್ದರು. ಇಂದು ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಘೋಷಣೆ ಮಾಡಿದ್ದಾರೆ.