ಕನ್ನಡ ರಾಜ್ಯೋತ್ಸವ| ಶುಭಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್ : ಇಂದು ಕನ್ನಡ ರಾಜ್ಯೋತ್ಸವ, ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದಂದು ಶುಭಾಶಯ ಕೋರಿದ್ದಾರೆ.

Ad Widget ... ..

ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ತಮ್ಮ ಶುಭಾಶಯವನ್ನು ಕನ್ನಡದಲ್ಲಿಯೇ ಪೋಸ್ಟ್ ಮಾಡಿರುವ ಅವರು, ‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ”, ಎಂದು ತಿಳಿಸಿದ್ದಾರೆ.

Ad Widget

“ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ತಮ್ಮ ಸಂದೇಶದಲ್ಲಿ ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *