ಸಮಗ್ರ ನ್ಯೂಸ್: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಮಧ್ಯಪ್ರದೇಶ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆ ಜಾರಿಯಾದಲ್ಲಿ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ.
ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸರ್ಕಾರಿ ಸೇವೆಗಳ ಎಲ್ಲಾ ನೇಮಕಾತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 33% ರಿಂದ 35% ಗೆ ಹೆಚ್ಚಿಸಲಾಗಿದೆ. ಇದು ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಮಧ್ಯಪುದೇಶದ ಡಿಸಿಎಂ ರಾಜೇಂದ್ರ ಶುಕ್ಲಾ ತಿಳಿಸಿದ್ದಾರೆ.