40 ಸಾವಿರ ಕೋಟಿ ಸಾಲ‌ ಪಡೆಯಲು ರಾಜ್ಯ ಸರ್ಕಾರಕ್ಕೆ ಆರ್ ಬಿಐ ಅನುಮತಿ

ಸಮಗ್ರ ನ್ಯೂಸ್: ರಾಜ್ಯದ ಒಟ್ಟಾರೆ ಸಾಲದ ಮೊತ್ತವು 5.53 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಇದೀಗ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ರಾಜ್ಯ ಸರಕಾರ ಅನುಮತಿ ಪಡೆದುಕೊಂಡಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರಕಾರದಿಂದ 6,855ಕೋಟಿ ರೂ. ಹಾಗೂ ಮುಕ್ತ ಮಾರುಕಟ್ಟೆಯಿಂದ 96,840 ಕೋ.ರೂ. ಸೇರಿ ಒಟ್ಟು 1.05 ಲಕ್ಷ ಕೋ.ರೂ.ಸಾಲ ಪಡೆಯುವ ಅಂದಾಜು ಮಾಡಿದ್ದ ಸರಕಾರ, ಸೆಪ್ಟಂಬರ್‌ ವರೆಗೆ 4 ಸಾವಿರ ಕೋ.ರೂ. ಸಾರ್ವಜನಿಕ ಸಾಲ ಮಾಡಿರುವುದಲ್ಲದೆ ಮುಕ್ತ ಮಾರುಕಟ್ಟೆ ಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲು ಆರ್‌ಬಿಐನಿಂದ ಅನುಮತಿ ಪಡೆದಿದ್ದ ಸರಕಾರ, ಇದೀಗ ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ತಲಾ 20 ಸಾವಿರ ಕೋಟಿ ರೂ.ಗಳಂತೆ ಇನ್ನೂ 40 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ ಸಾಲಕ್ಕೆ ಅನುಮತಿ ಪಡೆದುಕೊಂಡಿದೆ.

ಇದೂ ಸೇರಿದಂತೆ ಡಿಸೆಂಬರ್‌ ಅಂತ್ಯಕ್ಕೆ 67 ಸಾವಿರ ಕೋಟಿ ರೂ. ಸಾಲ ಪಡೆದಂತಾಗಲಿದೆ.
ಈಗಾಗಲೇ ವಾರ್ಷಿಕ ಬಡ್ಡಿ ರೂಪದಲ್ಲಿ 40 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಪಾವತಿಸುತ್ತಿರುವ ಸನಕಾರ, ನೌಕರರ ವೇತನ ಪರಿಷ್ಕರಣೆ, ಗ್ಯಾರಂಟಿ ಯೋಜನೆ ಸೇರಿದಂತೆ ಹಲವು ಬದ್ಧತಾ ವೆಚ್ಚಗಳ ಭಾರವನ್ನೂ ಹೊತ್ತಿದೆ.

Leave a Comment

Your email address will not be published. Required fields are marked *