ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget ... ..

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ. ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಆದೇಶ ಹೊರಡಿಸಿದೆ.

Ad Widget

ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ಸೂಚಿಸಿದೆ.

ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಯನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು ಎಂದು ಸೂಚಿಸಲಾಗಿದೆ.

Leave a Comment

Your email address will not be published. Required fields are marked *