ಲೈಂಗಿಕ ದೌರ್ಜನ್ಯ ಹಗರಣ| ಮಾಜಿ ಸಂಸದ ಪ್ರಜ್ವಲ್ ಗೆ ಸುಪ್ರೀಂನಲ್ಲೂ ಸಿಕ್ಕಿಲ್ಲ ಜಾಮೀನು

ಸಮಗ್ರ ನ್ಯೂಸ್: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ನಿರಾಕರಿಸಲಾಗಿದೆ.

. Ad Widget . Ad Widget . Ad Widget .

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಪ್ರಜ್ವಲ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ (Karnataka Highcourt) ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೂಡ ಜಾಮೀನು ನಿರಾಕರಿಸಿದೆ.

ಪ್ರಜ್ಚಲ್‌, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿತ್ತು.

Leave a Comment

Your email address will not be published. Required fields are marked *