ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Ad Widget ... ..

ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು.

Ad Widget

ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಆತ್ಮಹತ್ಯೆಗೂ ಮುನ್ನ ಸುರೇಶ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು 12 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *