ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ನ.15) ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು, ಶ್ರವಣಬೆಳಗೊಳ, ಹಾಸನದ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕಾರವಾರ ಹಾಗೂ ಪಣಂಬೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಗುರುವಾರ ಇಡೀ ದಿನ ಮೋಡಕವಿದ ವಾತಾವರಣವಿತ್ತು, ಆಗಾಗ ಮಳೆಯಾಗಿತ್ತು. ಇಂದು ಕೂಡ ಅದೇ ವಾತಾವರಣ ಮುಂದುವರೆದಿದೆ.