Ad Widget .

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಮಧ್ಯಂತರ ಜಾಮೀನು ತಡೆಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಮ್ಮತಿ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚಿಕಿತ್ಸೆಗೆ ಜಾಮೀನು ನೀಡುವಂತೆ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್‌ ಷರತ್ತುಬದ್ಧವಾಗಿ ಆರು ವಾರಗಳ ಜಾಮೀನು‌ ಮಂಜೂರು ಮಾಡಿತ್ತು. ‌ಅದಾದ ಮೇಲೆ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದರು. ಸದ್ಯ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Ad Widget . Ad Widget . Ad Widget .

ಈ ಮಧ್ಯೆ ಪ್ರಕರಣದ ತನಿಖಾಧಿಕಾರಿಗಳು ಜಾಮೀನು ರದ್ದತಿಗೆ ಸುಪ್ರೀಂ‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು. ಗೃಹ ಇಲಾಖೆ ಇದೀಗ ಸಮ್ಮತಿ ನೀಡಿದೆ.

ಗೃಹ ಇಲಾಖೆ ಅನುಮತಿ ನೀಡಿರುವ ವಿಚಾರವನ್ನು ನಗರದ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಖಚಿತ ಪಡಿಸಿದರು. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು. ಸಿದ್ಧತೆ ನಡೆದಿದೆ ಎಂದು ದಯಾನಂದ ಹೇಳಿದರು.

Leave a Comment

Your email address will not be published. Required fields are marked *