ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಯುವತಿ

ಸಮಗ್ರ ನ್ಯೂಸ್: ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ವಿವಾಹ ನಿಶ್ಚಿತಾರ್ಥ ಆಗಿದ್ದ ಕೀರ್ತನಾ ಶೆಟ್ಟಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿದ್ದರು. ಆದರೆ, ನೇಣು ಬಿಗಿದುಕೊಂಡು ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ.17ರಂದು ನಡೆದಿದೆ.

Ad Widget ... ..

ಇನ್ನು ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಆದರೆ, ಮದುವೆಗೂ ಮುನ್ನ ಯುವತಿ ನೇಣಿಗೆ ಕೊರಳೊಡ್ಡಿ ಆತ್ಮಯತ್ಯೆಗೆ ಯತ್ನಿಸಿದ್ದು, ಅದರಿಂದ ಕಾಪಾಡಿ ಚಿಕಿತ್ಸೆಗೆ ದಾಖಲಿಸಿದರೂ ಬದುಕುಳಿಯದೇ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *