ಸಚಿವರ ಮೆರವಣಿಗೆ ವೇಳೆ ಪೊಲೀಸರ ಕಾಲಿನ ಮೇಲೆ ಹರಿದ ಜೀಪ್

Ad Widget ... ..

ಬೆಂಗಳೂರು: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದ್ದು, ಪೊಲೀಸರ ಕಾಲಿನ ಮೇಲೆಯೇ ಜೀಪಿನ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Ad Widget

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಸ್ವಾಗತಿಸುವ ಕಾರ್ಯಕ್ರಮದ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸಚಿವ ನಾರಾಯಣಸ್ವಾಮಿ ಮೆರವಣಿಗೆ ನಡೆಸುತ್ತಿದ್ದ ಜೀಪ್ ನ ಚಕ್ರ ಪೊಲೀಸ್ ಸಿಬ್ಬಂದಿ ಕಾಲಿನ ಮೇಲೆ ಹರಿದಿದೆ.

ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಈ ವೇಳೆ ಚಿಕ್ಕಜಾಲ ಠಾಣೆ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *