ಸಮಗ್ರ ನ್ಯೂಸ್: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿತ್ತು. ಐ ವಿ ಗ್ಲುಕೋಸ್ ನಿಂದ ಬಾಣಂತಿಯರ ಸಾವು ಆಗಿದೆ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಬೆಳಗಾವಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇದೀಗ ಆರ್‌ಎಲ್‌ಎಸ್ ಐವಿ ಗ್ಲುಕೋಸ್ ಬಾಕ್ಸ್ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ.
ಹೌದು ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದಲ್ಲಿ ಐವಿ ಗ್ಲುಕೋಸ್ ಪತ್ತೆಯಾಗಿದೆ.ಖಚಿತ ಮಾಹಿತಿಯನ್ನು ಆಧರಿಸಿ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಡೇಟ್ ಬಾರ್ ಆಗಿರುವಂತ ‘RLS IV ಗ್ಲುಕೋಸ್’ ಇದ್ದಂತಹ ಹತ್ತಾರು ಬಾಕ್ಸ್ ಗಳುಪತ್ತೆಯಾಗಿವೆ.ಕಳೆದ ಏಪ್ರಿಲ್ ತಿಂಗಳಿನಿಂದಲೇ RLS IV ಗ್ಲುಕೋಸ್ ಪೂರೈಕೆ ಆಗಿದೆ.
ಕಳೆದೊಂದು ಗಂಟೆಯಿಂದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ 8 ಅಧಿಕಾರಿಗಳಿಂದ ದಾಳಿ ಮಾಡಿದ್ದು, ಉಗ್ರಾಣದಲ್ಲಿ ಪರಿಶೀಲನೆ ಮುಂದುವರೆದಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್ ಗಳು ಶೇಖರಿಸಿದ್ದ ಬಾಕ್ಸ್ ಗಂಡು ಲೋಕಾಯುಕ್ತ ಅಧಿಕಾರಿಗಳು ಇದೀಗ ಶಾಕ್ ಆಗಿದ್ದಾರೆ. ಐ ವಿ ಗ್ಲುಕೋಸ್ ಎಲ್ಲೆಲ್ಲಿ ಪೂರೈಕೆಯಾಗಿದೆ ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.