ಸಮಗ್ರ ನ್ಯೂಸ್: ಡ್ಯೂಟಿ ರಿಪೋರ್ಟ್ ಮಾಡಲು ಬಂದ ದಿನವೇ ಐಪಿಎಸ್ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಹರ್ಷಭರ್ದನ್ (27) ಎಂದು ಗುರುತಿಸಲಾಗಿದ್ದು, ಇವರು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಹಾಸನನದ ಕಿತ್ತಾನೆ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಭರ್ದನ್ (IPS Officer) ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದ್ದು, ಐಪಿಎಸ್ ವೃತ್ತಿಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ. ಮೈಸೂರಿನಲ್ಲಿರುವ ಐಜಿಪಿ ಕಚೇರಿಗೆ ತೆರಳಿದ್ದ ಹರ್ಷಭರ್ದನ್ ಆ ಬಳಿಕ ಹಾಸನದ ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದರು. ವಾಹನದ ಟೈಯರ್ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ತಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜಿತಾ, ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.