ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ| ಕೊಡಗು, ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಡಿ.3ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 3ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಕೇರಳ ಹಾಗೂ ಕರ್ನಾಟಕದ ಕರಾವಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ.

Ad Widget ... ..

ಕೇಂದ್ರ ಹವಾಮಾನ ಇಲಾಖೆಯು ನೀಡಿದ ಮಾಹಿತಿಯಂತೆ ಕಾಸರಗೋಡು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದ್ದು, ಡಿ.3 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Ad Widget

ಶಾಲೆ, ಕಾಲೇಜು, ವೃತ್ತಿಪರ ಕಾಲೇಜು, ಅಂಗನವಾಡಿ, ಟ್ಯೂಷನ್ ಸೆಂಟರ್, ಕೋಚಿಂಗ್ ಸೆಂಟರ್ ಮತ್ತು ಮದ್ರಸಾಗಳಿಗೆ ರಜೆ ಅನ್ವಯವಾಗಲಿದೆಯೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಂಗಾಳ ಕೊಲ್ಲಿಯ ಆಳ ಸಮುದ್ರದಲ್ಲಿ ರೂಪುಗೊಂಡ ಚಂಡಮಾರುತದಿಂದಾಗಿ ಕೇರಳದಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಡಿ.2 ರಂದು ಮಧ್ಯಾಹ್ನದ ಬಳಿಕ ಮಳೆ ಆರಂಭವಾಗಿದ್ದು, ಡಿ.3 ರಂದು ಇನ್ನಷ್ಟು ಪ್ರಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Leave a Comment

Your email address will not be published. Required fields are marked *