Ad Widget .

ಫೆಂಗಾಲ್ ಚಂಡಮಾರುತ| ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ| ಇಂದು ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಾಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ(ಡಿ2 ) ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು ನಗರದಲ್ಲಿ ಭಾರೀ ಮಳೆ ಸುರಿದಿದ್ದು ಸಂಜೆಯ ಹಲವೆಡೆ ಮುಖ್ಯ ರಸ್ತೆಗಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು.

Ad Widget . Ad Widget . Ad Widget .

ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಇಂದು(ಡಿ.3) ಮಂಗಳವಾರಕ್ಕೆ ಅನ್ವಯವಾಗುವಂತೆ ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಂಗನವಾಡಿ, ಶಾಲೆ ಹಾಗೂ ಪಿಯುಸಿವರೆಗಿನ ಕಾಲೇಜುಗಳಿಗೆ ಜಿಲ್ಲಾಡಳಿತಗಳು ರಜೆ ಘೋಷಣೆ ಮಾಡಿದೆ.

ಅಕಾಲಿಕ ಭಾರೀ ಮಳೆಯಿಂದಾಗಿ ಅಡಿಕೆ, ಭತ್ತ, ತರಕಾರಿ, ಮೇವು, ಕಾಫಿ ಸೇರಿದಂತೆ ವ್ಯಾಪಕ ಕೃಷಿ ಹಾನಿ ಸಂಭವಿಸಿದೆ. ಅನೇಕ ಕಡೆ ಯಕ್ಷಗಾನ ಕಾರ್ಯಕ್ರಮಗಳು ರದ್ದಾಗಿದೆ. ಕೆಲವು ಹರಕೆ ಮೇಳಗಳು ರಂಗಸ್ಥಳಗಳ ಬದಲು ಹಾಲ್ ಗಳಲ್ಲಿ ಪ್ರದರ್ಶನ ನೀಡಲಿದ್ದಾರೆ.

Leave a Comment

Your email address will not be published. Required fields are marked *