Ad Widget .

ನಾಪತ್ತೆಯಾಗಿದ್ದ ಸಂದೀಪ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್:ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ| ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದಿಂದ ಸುಮಾರು 1.5 ಕಿ.ಮೀ. ದೂರ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ನ.2ರಂದು ಸಂಜೆ ಪತ್ತೆಯಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆತನನ್ನು ಸ್ನೇಹಿತ, ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನು ಹಣಕಾಸಿನ ವಿವಾದಕ್ಕೆ ಸಂಬಂಧಿಸಿ ನೆಟ್ಟಣ ರೈಲು ನಿಲ್ದಾಣದ ಬಳಿಯ ಗುಡ್ಡದಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಶವವನ್ನು ಕಾಡಿನೊಳಗೆ ಕೊಂಡೊಯ್ದು ಸುಟ್ಟುಹಾಕಲು ಯತ್ನಿಸಿರುವುದು ತನಿಖೆಯಿಂದ ಬಯಲಾಗಿದೆ.

Ad Widget . Ad Widget . Ad Widget .

ಸಂದೀಪ್ ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದು, ನ. 27 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ನಾಪತ್ತೆಯಾಗಿದ್ದ. ಆತ ಕೆಲಸ ಮುಗಿಸಿ ಪ್ರತೀಕ್ ಜತೆಗೆ ಕಾರಿನಲ್ಲಿ ಹೋಗಿರುವುದಾಗಿ ತಾಯಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತೀಕ್ ಹಾಗೂ ಇನ್ನೋರ್ವನನ್ನು ಪೊಲೀಸರು ನ. 1ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ರಹಸ್ಯ ಬಯಲಾಗಿದೆ.

ಆರೋಪಿಯನ್ನು ನಮ್ಮ ವಶಕ್ಕೆ ನೀಡಿ ಎಂದು ಸ್ಥಳೀಯರು ಪೊಲೀಸ್ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಕೊಲೆಗೈದು ಮೃತದೇಹವನ್ನು ಕಾಡಿಗೆ ಸಾಗಿಸಲು ಒಬ್ಬನೇ ವ್ಯಕ್ತಿಗೆ ಸಾಧ್ಯವಿಲ್ಲ. ಕೃತ್ಯದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಎಲ್ಲರನ್ನೂ ಕೂಡಲೇ ಬಂಧಿಸಬೇಕೆಂದು ಸ್ಥಳೀಯರು ಆಗ್ರಹಿಸಿದರು.

ಮೃತದೇಹ ಪತ್ತೆಯಾಗುವ ಮೊದಲು ಸೋಮವಾರ ಬೆಳಗ್ಗೆ ಕಡಬ ಪೊಲೀಸ್ ಠಾಣೆಗೆ ಆಗಮಿಸಿದ ಸಂದೀಪ್‌ನ ತಾಯಿ, ಸಂಬಂಧಿಕರು ಹಾಗೂ ಊರವರು ಪೊಲೀಸರ ಕಾರ್ಯವೈಖರಿ ಬಗ್ಗೆ ತೀರ ಆಕ್ರೋಶವ್ಯಕ್ತಪಡಿಸಿದರು.ಸಂದೀಪ್‌ನನ್ನು ಕೊಲೆ ಮಾಡಿದ್ದಾನೆ ಎಂದು ಸಂಶಯಿಸಲಾಗಿದ್ದ ಆರೋಪಿ ಪ್ರತೀಕ್‌ನನ್ನು ಠಾಣೆಯಲ್ಲೇ ಇಟ್ಟುಕೊಂಡು ಪೊಲೀಸರು ವಿನಾ ಕಾರಣ ಕಾಲಹರಣ ಮಾಡುತ್ತಿದ್ದಾರೆ.

ಆರಂಭದಲ್ಲಿ ನಾಪತ್ತೆ ದೂರು ನೀಡಲು ಠಾಣೆಗೆ ಬಂದಾಗಲೂ ಪೊಲೀಸರು ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದರು. ಬಳಿಕ ಎಂಎಲ್‌ಸಿ ಕಿಶೋರ್ ಕುಮಾರ್ ದೂರವಾಣಿ ಕರೆ ಮಾಡಿದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಆರೋಪಿಯು ಪೊಲೀಸರ ವಶ ದಲ್ಲಿದ್ದರೂ ಆತ ಸಂದೀಪ್‌ನ ಮೃತದೇಹವನ್ನು ಎಲ್ಲಿ ಬಚ್ಚಿಟ್ಟಿದ್ದಾನೆ ಎನ್ನುವುದನ್ನು ಕಂಡು ಹಿಡಿಯಲು ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿದ ಸಾರ್ವಜನಿಕರು, ದೂರು ನೀಡಲು ಬಂದವರನ್ನೇ ಗದರಿಸಿದ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

Leave a Comment

Your email address will not be published. Required fields are marked *