Ad Widget .

ಬೆಳಗಾವಿಯಲ್ಲಿ ವಾಟ್ಸಾಪ್ ಸ್ಟೇಟಸ್ ಗೆ ಫೋಟೋ ಹಾಕಿದಕ್ಕೆ, ಮನನೊಂದ ಯುವತಿ ಆತ್ಮಹತ್ಯೆಗೆ ಶರಣು!

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಯುವತಿಗೆ ಮದುವೆ ಆಗಿದೆ ಆದರು ಕೂಡ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಈಕೆಯ ಫೋಟೋ ಹಾಕಿದ್ದಾನೆ. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ, ಮನನೊಂದ ಆಕೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆರತಿ ಕಾಂಬಳೆ (26) ಎಂದು ತಿಳಿದುಬಂದಿದೆ. ಈಕೆ ಮದುವೆಯಾಗಿ ರಾಯಭಾಗ್ ತಾಲೂಕಿನ ಮೊರಬ ಗ್ರಾಮದಲ್ಲಿ ಗಂಡನ ಮನೆಯಲ್ಲಿ ವಾಸಿಸುತ್ತಿದ್ದಳು.ಸಾಗರ ವಾಟ್ಸಪ್ ಸ್ಟೇಟಸ್‌ನಲ್ಲಿ ಆರತಿ ಫೋಟೋ ಹಾಕಿದ್ದು ಫುಲ್ ವೈರಲ್ ಆಗಿತ್ತು. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ಮನನೊಂದು ಇಂದು ಆರತಿ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ಸಂಬಂಧಿಕರ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ರಾಯಭಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *