ಸಮಗ್ರ ನ್ಯೂಸ್ : ನಮಗೆ ಮಾರ್ಗದರ್ಶನ ನೀಡಿ ಉತ್ತಮ ದಾರಿಯೆಡೆಗೆ ಕೊಂಡೊಯ್ಯಬೇಕಾಗಿರುವ ಶಿಕ್ಷಕರೇ ಹಾದಿ ತಪ್ಪಿದರೆ ಹೇಗಿರುತ್ತಿದೆ ಎಂಬುದಕ್ಕೆ ಈ ಪ್ರಕರಣ ಜೀವಂತ ಸಾಕ್ಷಿಯಾಗಿದೆ. ಉತ್ತರಪ್ರದೇಶದ ಮೀರತ್‌ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉತ್ತರಪ್ರದೇಶದ ಮೀರತ್‌ನಲ್ಲಿ 25 ವರ್ಷದ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.ಈ ಬಗ್ಗೆ ಮಾತನಾಡಿರುವ ಮೀರತ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಡಹ್ರಾಡೂನ್ ಮೂಲದ ಯುವತಿ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಮೀರತ್ ಮೂಲದ 16 ವರ್ಷದ ಬಾಲಕನನ್ನು ಪರಿಚಯ ಮಾಡಿಕೊಂಡಿದ್ದಳು.ಇಬ್ಬರ ನಡುವೆ ದಿನ ಕಳೆದಂತೆ ಆತ್ಮೀಯತೆ ಹೆಚ್ಚಿದ್ದು, ಪರಿಚಯ ಪ್ರೀತಿಯಾಗಿ ತಿರುಗಿದೆ.
ಕೆಲ ದಿನಗಳ ಹಿಂದೆ ಡೆಹ್ರಾಡೂನ್‌ನಿಂದ ಬಂದ ಯುವತಿ ಬಾಲಕನನ್ನು ಗಾಜಿಯಾಬಾದ್‌ಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆತನೊಂದಿಗೆ ಮದುವೆ ಮಾಡಿಕೊಂಡಿದ್ದಾಳೆ.ಈ ವಿಚಾರ ತಿಳಿದ ಬಾಲಕನ ಪೋಷಕರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಮಗನನ್ನು ಹೆದರಿಸಿ ಶಿಕ್ಷಕಿ ಮದುವೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಬಾಲಕನ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿದ್ದರೂ, ಅದಕ್ಕೆ ಕಾನೂನು ಮಾನ್ಯತೆ ಇಲ್ಲ.ಭಾರತೀಯ ಕಾನೂನಿನ ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮೀರತ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.