Ad Widget .

ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಟಿ ಹಿನ್ನೆಲೆ| ಎರಡು ದಿನ ಮದ್ಯ ಮಾರಾಟ ಬಂದ್ ಮಾಡಿ ದ.ಕ ಡಿಸಿ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಡಿಸೆಂಬರ್ 6ರಂದು ಪಂಚಮಿ ರಥೋತ್ಸವ ಹಾಗೂ ಡಿಸೆಂಬರ್ 7ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದೆ.

Ad Widget . Ad Widget .

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಜಾಡಿ ಬಳಿ ಇರುವ ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಡಿಸೆಂಬರ್ 6 ರ ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 7ರ ಮಧ್ಯರಾತ್ರಿ 12 ಗಂಟೆಯ ವರೆಗೆ ಬಂದ್ ಇರಿಸುವಂತೆ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *