Ad Widget .

ರಾಜ್ಯದ ಜನತೆಗೆ ಬಿಲ್ ಶಾಕ್ ನೀಡಲು ಸಿದ್ದತೆ ಮಾಡಿಕೊಂಡ ಎಸ್ಕಾಂ| ಕೆಇಆರ್ ಸಿ‌‌ ಗೆ ದರ ಏರಿಕೆ ಮಾಡಲು ಪ್ರಸ್ತಾಪ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಲೆ ಏರಿಕೆಗೆ ತತ್ತರಿಸಿರುವ ಜನ ಸಾಮಾನ್ಯರಿಗೆ ಈಗ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಂಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ವಿದ್ಯುತ್ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾಪ ಸಲ್ಲಿಸಿವೆ.

Ad Widget . Ad Widget .

ಕೆಇಆರ್‌ಸಿಗೆ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮತ್ತು ಸೆಸ್ಕಾಂನಂತಹ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಿಸುವಂತೆ ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಿವೆ. ವಿದ್ಯುತ್ ಖರೀದಿಗೆ ತಗಲುವ ವೆಚ್ಚ ಹಾಗೂ ಪೂರೈಕೆ, ಕಲ್ಲಿದ್ದಲು ಸಂಗ್ರಹಣೆಗೆ ತಗಲುವ ವೆಚ್ಚ ಸೇರಿದಂತೆ ಇತರೆ ಖರ್ಚುಗಳು ಹೆಚ್ಚಾಗಿದ್ದು ಆರ್ಥಿಕ ಒತ್ತಡವನ್ನು ಉಲ್ಬಣಗೊಳಿಸಿವೆ ಎಂದು ಪ್ರಸ್ತಾವನೆಯಲ್ಲಿ ಕಂಪನಿಗಳು ಹೇಳಿಕೊಂಡಿವೆ. ಹೀಗಾಗಿ ಪ್ರತಿ ಯೂನಿಟ್‌ಗೆ 1 ರೂಪಾಯಿ 50 ಪೈಸೆ ದರ ಏರಿಕೆ ಮಾಡುವಂತೆ ಬೆಸ್ಕಾಂ ಮನವಿ ಮಾಡಿದರೆ, ಇತರೆ ಎಸ್ಕಾಮ್‌ಗಳು ಪ್ರತಿ ಯೂನಿಟ್‌ಗೆ 1 ರೂಪಾಯಿ 20 ಪೈಸೆ ಹೆಚ್ಚಳಕ್ಕೆ ಕೋರಿವೆ.

Ad Widget . Ad Widget .

ಅಲ್ಲದೆ ಪ್ರಸ್ತಾವನೆಯಲ್ಲಿ ಪ್ರತಿ ಯೂನಿಟ್‌ಗೆ ಮೊದಲ ವರ್ಷ ಅಂದರೆ 2025-26ಕ್ಕೆ 67 ಪೈಸೆ, 2ನೇ ವರ್ಷ ಅಂದರೆ 2026-27ಕ್ಕೆ ಯೂನಿಟ್‌ಗೆ 74 ಪೈಸೆ ಹಾಗೂ ಮೂರನೇ ವರ್ಷ ಅಂದರೆ 2027-28ಕ್ಕೆ 91 ಪೈಸೆ ವಿಸ್ತರಣೆ ಮಾಡಲು ಮನವಿ ಮಾಡಲಾಗಿದೆ. ಒಂದು ವೇಳೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಒಪ್ಪಿಗೆ ಸೂಚಿಸಿದರೆ ಪ್ರಸ್ತಾವನೆಯಂತೆ ವಿದ್ಯುತ್ ದರ ಹೆಚ್ಚಾಗಲಿದೆ.

Leave a Comment

Your email address will not be published. Required fields are marked *