ಸಮಗ್ರ ನ್ಯೂಸ್ : ಚಳಿಗಾಲ ಅಧಿವೇಶನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹಮ್ಮಿಕೊಂಡಿದ್ದ ಮಹಾಮೇಳಾವ್ ಪ್ರತಿಭಟನೆ ನಡೆಸಲು ಬಂದಿದ್ದ ಎಂಇಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಡಿ.09ರಂದು ಪೊಲೀಸರು ವಶಕ್ಕೆ ಪಡೆದರು.
ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಬಂದಿದ್ದ ಎಂಇಎಸ್ ಕಾರ್ಯಕರ್ತರು ಜೈ ಮಹಾರಾಷ್ಟ್ರ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಘೋಷಣೆ ಕೂಗಿದರು.ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದುಕೊಂಡರು.
ಬೆಳಗಾವಿ ನಗರ ಸೇರಿದಂತೆ ವಿವಿಧ ಹಳ್ಳಿಗಳಿಂದ ಐದಾರು ಜನರ ಗುಂಪು ಕಟ್ಟಿಕೊಂಡು ಬರುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಹೋದರು. ಇನ್ನೂ ನಾಲ್ಕು-ಐದು ಜನ ಬಂದು ಪ್ರತಿಭಟನೆ ನಡೆಸುತ್ತಿದ್ದು, ಇಲ್ಲಿಗೆ ಬಂದ ಪ್ರತಿಯೊಬ್ಬರನ್ನೂ ವಶಕ್ಕೆ ಪಡೆದು ಕೊಳ್ಳುತ್ತಿದ್ದಾರೆ.ಧರ್ಮವೀರ ಸಂಭಾಜಿ ವೃತ್ತದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಈ ವೃತ್ತದಲ್ಲಿ ಸಾಗುವ ವಾಹನ ಸಂಚಾರ ದಟ್ಟಣೆ ಆಗುತ್ತಿದೆ.