Ad Widget .

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

Ad Widget . Ad Widget .

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.

Ad Widget . Ad Widget .

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *