Ad Widget .

ಕರ್ನಾಟಕ ಸರ್ಕಾರದ ವಿರುದ್ಧ ಸಿಡಿದೆದ್ದ ಏಕನಾಥ್

ಸಮಗ್ರ ನ್ಯೂಸ್ : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮರಾಠಿ ಭಾಷಿಗರು ಸಮಾವೇಶ ಏರ್ಪಡಿಸಿದ್ದರು. ಈ ದೇಶದಲ್ಲಿ ಎಲ್ಲಿ ಬೇಕಾದರೂ ವಾಸ ಮಾಡಬಹುದು, ಎಲ್ಲಿ ಬೇಕಾದರೂ ಹೋಗಬಹುದು, ಸಮ್ಮೇಳನ ಆಯೋಜಿಸಬಹುದು.ಆದರೆ ಕರ್ನಾಟಕ ಸರ್ಕಾರ ದಬ್ಬಾಳಿಕೆಯ ಚಕ್ರವನ್ನು ಬೀಸಿ ಸಮ್ಮೇಳನವನ್ನು ಆಯೋಜಿಸಿದ್ದ ಮೇಯ‌ರ್, ಶಾಸಕರು ಸೇರಿದಂತೆ ಮರಾಠಿ ಏಕೀಕರಣ ಸಮಿತಿಯ 100ಕ್ಕೂ ಹೆಚ್ಚು ಮರಾಠಿ ಭಾಷಿಕ ಸಹೋದರ-ಸಹೋದರಿಯರನ್ನು ಬಂಧಿಸಿದೆ ಎಂದು ವಾಗ್ದಾಳಿ ನಡೆಸಿದರು.

Ad Widget . Ad Widget .

ದೇಶಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರ ಪ್ರತಿಮೆಯನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವವರನ್ನು ನಾನು ಖಂಡಿಸುತ್ತೇನೆ. ನಮ್ಮ ನಿಲುವು ಸ್ಪಷ್ಟವಾಗಿದೆ, ಇಂತಹ ದಬ್ಬಾಳಿಕೆ ನಡೆಸುತ್ತಿರುವ ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಶಿಂಧೆ ಕಿಡಿಕಾರಿದ್ದಾರೆ.

Leave a Comment

Your email address will not be published. Required fields are marked *