Ad Widget .

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನೆಲೆ| ಡಿ.11ರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ(ಡಿ. ೧೧) ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

Ad Widget . Ad Widget .

ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.

Ad Widget . Ad Widget .

ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *