Ad Widget .

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಜಯಣ್ಣ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಘಟನೆ ನಡೆದಿದ್ದು, ಜಯಣ್ಣ ಅವರಿಗೆ 72 ವರ್ಷ ವಯಸ್ಸಾಗಿತ್ತು 1994 ಹಾಗು 2013 ರಲ್ಲಿ ಶಾಸಕರಾಗಿದ್ದ ಎಸ್ ಜಯಣ್ಣ ಅವರಿಗೆ ಅನಾರೋಗ್ಯದ ಹಿನ್ನಲೆ 2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ.

Ad Widget . Ad Widget .

ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ನವೆಂಬರ್ 7 ರಂದು ಕೊಳ್ಳೇಗಾಲದ ಜಯಣ್ಣ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ನೂತನ ಮನೆಯ ನಾಮಫಲಕವನ್ನೂ ಕೂಡ ಸಿದ್ದರಾಮಯ್ಯ ಅವರೇ ಅನಾವರಣ ಮಾಡಿದ್ದರು. ನೂತನ ಮನೆಯ ಗೃಹ ಪ್ರವೇಶಕ್ಕೆ ಆಹ್ವಾನ ಪತ್ರಿಕೆ ಕೊಡಲು ಹೋಗುತ್ತಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಈ ವರ್ಷ ಮಾರ್ಚ್ ತಿಂಗಳಿನಲ್ಲಿ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ್ದ ಜಯಣ್ಣ, ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಜನ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ, ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.

ಈ ಅಧಿಕಾರವನ್ನು ಸದ್ಬಳಕ್ಕೆ ಮಾಡಿಕೊಂಡು ಜನರ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಹೇಳಿದ್ದರು.ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕೃಷ್ಣ ಅವರು ತಮ್ಮ 92ನೇ ವಯಸ್ಸಿಗೆ ನಿಧನರಾಗಿದ್ದಾರೆ.ರಾಜಕೀಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆದ್ದು ಶಾಸಕರಾದ ನಂತರ ಕಾಂಗ್ರೆಸ್ ಸೇರಿ 43 ವರ್ಷಗಳಲ್ಲಿ ಶಾಸಕ, ಸಚಿವ, ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ವಿದೇಶಾಂಗ ಸಚಿವರಂತಹ ಉನ್ನತ ಹುದ್ದೆಗಳನ್ನ ಅಲಂಕರಿಸಿ, ಮಂಡ್ಯದಿಂದ ಇಂಡಿಯಾದಲ್ಲೇ ಜನಪ್ರಿಯ ರಾಜಕಾರಣಿಯಾಗಿ ಬೆಳೆದರು.

Leave a Comment

Your email address will not be published. Required fields are marked *