ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು.
ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ 40ಕ್ಕೂ ಹೆಚ್ಚು ಪೇಜ್ ಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಸಂಬಂಧ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಮಾರತ್ತಹಳ್ಳಿ ಠಾಣೆಯಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅತುಲ್ ಮಡದಿ ನಿಕಿತಾ ಸಿಂಘಾನಿಯ ಎ1 ಆರೋಪಿ, A2 ನಿಶಾ ಸಿಂಘಾನಿಯಾ, A3 ಅನುರಾಗ್ ಸಿಂಘಾನಿಯಾ ಹಾಗೂ ಪ್ರಕರಣದ ನಾಲ್ಕನೇ ಆರೋಪಿ ಸುಶೀಲ್ ಸಿಂಘಾನಿಯಾ 2019ರಲ್ಲಿ ಅತುಲ್ ಸುಭಾಷ್-ನಿಕಿತಾ ಸಿಂಘಾನಿಯ ಮದುವೆಯಾಗಿದ್ದು,ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ.
ಆ ಕೇಸ್‌ನ ಇತ್ಯರ್ಥಕ್ಕಾಗಿ ₹3 ಕೋಟಿ ಕೊಡಬೇಕೆಂದು ಒತ್ತಾಯ ಮಾಡ್ತಿದ್ದರು. ಮಗನ ಭೇಟಿಗೆ ಅವಕಾಶ ನೀಡಲು ₹30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ₹3 ಕೋಟಿ ಹಣ ನೀಡದಿದ್ರೆ ನೀನು ಬದುಕಬೇಡ, ಆತ್ಮಹತ್ಯೆ ಮಾಡಿಕೋ ಎಂದು ಅಣುಕಿಸುತ್ತಿದ್ದರು.ಇದರಿಂದ ಮಾನಸಿಕವಾಗಿ & ದೈಹಿಕವಾಗಿ ನೊಂದು ಆತ್ಮಹತ್ಯೆ ಮಾಡ್ಕೊಂಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.