ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.!

ಸಮಗ್ರ ನ್ಯೂಸ್ : ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.6 ಹಾಗೂ 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 6 ವರ್ಷದ ಪುತ್ರ ಹಾಗೂ 7 ವರ್ಷದ ಮಗಳನ್ನು ಕುಸುಮಾ (35) ಎಂಬಾಕೆ ಉಸಿರುಗಟ್ಟಿಸಿ ಸಾಯಿಸಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget ... ..

ಕೌಟುಂಬಿಕ ಕಲಹದ ಹಿನ್ನೆಲೆ ತಾಯಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟು ನಮ್ಮ ಸಾವಿಗೆ ನಾವೇ ಕಾರಣವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಿಗೇಹಳ್ಳಿಯ ಫ್ಲ್ಯಾಟ್ ನಲ್ಲಿ ದಂಪತಿ ವಾಸವಾಗಿತ್ತು. ಕುಸುಮಾ ಪತಿ ಜೊತೆ ಸುರೇಶ್ ಕೆಲ ದಿನಗಳ ಹಿಂದೆ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *