ಹವಾಮಾನ ವರದಿ| ಚಳಿ‌ ಜೊತೆ ಡಿ.18ರಿಂದ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೈ ಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಇದರ ನಡುವೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಬಂಗಾಳ ಕೊಲ್ಲಿಯಲ್ಲಿ ನಿಮ್ನ ಒತ್ತಡ ಉಂಟಾಗುವ ಸಾಧ್ಯತೆ ಇದ್ದು, ಡಿಸೆಂಬರ್ 18 ರಿಂದ ಮಳೆಯಾಗುವ ಲಕ್ಷಣಗಳಿವೆ. ಒಂದು ವೇಳೆ ಮತ್ತೆ ಮಳೆಯಾದರೆ ಚಳಿ ಪ್ರಮಾಣ ಕಡಿಮೆಯಾಗಲಿದೆ.

Ad Widget

ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಗದಗ, ಹಾವೇರಿ, ಧರವಾಡ, ಕೊಪ್ಪಳ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಮಗ್ಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಐದು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಡಿಸೆಂಬರ್ 17ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *