Ad Widget .

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಬಗ್ಗೆ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಪೊಲೀಸರು ಸ್ನೇಹಮಯಿ ಕೃಷ್ಣ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಡಿ. 17 ರಂದು ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.

Ad Widget . Ad Widget . Ad Widget .

ಇದೀಗ ಪೊಲೀಸರು ಇದೀಗ ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ವಿರುದ್ಧ ದೂರು ಮಾಡಿದ್ದ ಸ್ನೇಹಮಯಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.

ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗತ್ತಿಸಿದ್ದರು.ಈ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಸ್ನೇಹಮಯಿ ಕೃಷ್ಣ ಅವರ ವಿರುದ್ಧ ದೂರು ದಾಖಲಿಸಿದ್ದರು. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆ‌ರ್ ದಾಖಲಾಗಿತ್ತು.

ಸ್ನೇಹಮಯಿ ಕೃಷ್ಣ ಅವರು ಮೈಸೂರಿನ ಬಂಡಿಪಾಳ್ಯ ನಿವಾಸಿಯಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಮಾಹಿರಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗುವಂತೆ ಮಾಡುವ ಮೂಲಕ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸದ್ಯ ಸುದ್ದಿಯಲ್ಲಿದ್ದಾರೆ.

Leave a Comment

Your email address will not be published. Required fields are marked *