ಲಾರಿ ಪಲ್ಟಿ: ರಸ್ತೆ ಬದಿಯಲ್ಲಿ ನಿಂತಿದ್ದ ಮೂವರು ಪಿಡಬ್ಲ್ಯೂಡಿ ಅಧಿಕಾರಿಗಳು ಸಾವು

ಸಮಗ್ರ ನ್ಯೂಸ್ : ಲಾರಿಯೊಂದು ರಸ್ತೆ ಬದಿ ನಿಂತಿದ್ದ ಲೋಕೋಪಯೋಗಿ ಇಲಾಖೆಯ ಮೂವರು ಅಧಿಕಾರಿಗಳ ಮೇಲೆ ಪಲ್ಟಿಯಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ.

Ad Widget ... ..

ಮೃತರನ್ನು ಮಲ್ಲಿಕಾರ್ಜುನ (29), ಶಿವರಾಜು (28), ಮೆಹಬೂಬ್ (30) ಎಂದು ಗುರುತಿಸಲಾಗಿದೆ.ಲೋಕೋಪಯೋಗಿ ಇಲಾಖೆಯಲ್ಲಿ ಜೂನಿಯರ್ ಇಂಜಿನಿಯರ್‌ಗಳಾಗಿದ್ದ ಮಲ್ಲಿಕಾರ್ಜುನ, ಶಿವರಾಜು ಮತ್ತು ಕಂಪ್ಯೂಟರ್ ಆಪರೇಟರ್ ಆಗಿದ್ದ ಮೆಹಬೂಬ್ ಕೆನಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ಈ ವೇಳೆ ಮೂವರು ರಸ್ತೆ ಬದಿಯಲ್ಲಿ ಮಾತನಾಡುತ್ತ ನಿಂತಿದ್ದರು.

Ad Widget

ಅದೇ ಮಾರ್ಗವಾಗಿ ಬಂದ ಹೊಟ್ಟು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಪರಿಣಾಮ ಲಾರಿ ಕೆಳಗೆ ಸಿಲುಕಿ ಮೂವರು ಪಿಡಬ್ಲ್ಯೂಡಿ ಅಧಿಕಾರಿಗಳು ಮೃತಪಟ್ಟಿದ್ದಾರೆ.ಘಟನೆಗೆ ಸಂಬಂಧಿಸಿ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *