ಕೊಚ್ಚಿ: -ಶಬರಿಮಲೆ ಯಾತ್ರೆ ಕೈಗೊಳ್ಳುವ ಅಪ್ಪನೊಂದಿಗೆ ಅಪ್ರಾಪ್ತ ಬಾಲಕಿಯರು ದೇವರ ದರ್ಶನಕ್ಕೆ ತೆರಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಶಬರಿಮಲೆ ಯಾತ್ರೆ ಕೈಗೊಳ್ಳುವವರು ಕಡ್ಢಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಹಾಗೂ ಲಸಿಕೆ ಪಡೆಯಲು ಸಾಧ್ಯವಿಲ್ಲದ ಅಪ್ರಾಪ್ತ ಮಕ್ಕಳನ್ನು ಜತೆಯಲ್ಲಿ ಕರೆದುಕೊಂಡು ಹೋಗಬಾರದು ಎಂದು ಕೇರಳ ಸರ್ಕಾರ ಆದೇಶ ಹೊರಡಿಸಿತ್ತು.
ಸರ್ಕಾರದ ಈ ಆದೇಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಿದ್ದ 9 ವರ್ಷದ ಬಾಲಕಿ ನಾನು ನಮ್ಮ ತಂದೆಯೊಂದಿಗೆ ಶಬರಿಮಲೆ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡಿದ್ದಳು. ಬಾಲಕಿಯ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಶಬರಿಮಲೆ ಯಾತ್ರೆ ಕೈಗೊಳ್ಳುವವರು ತಮ್ಮೊಂದಿಗೆ ತಮ್ಮ ಅಪ್ರಾಪ್ತ ಮಕ್ಕಳನ್ನು ಕರೆದೊಯ್ಯಬಹುದು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.