ಸಮಗ್ರ ನ್ಯೂಸ್: అంತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ನೋರ್ ಫೆಬ್ರವರಿಯಲ್ಲಿ ಹಿಂತಿರುಗುವುದಿಲ್ಲ ಅಂತ ನಾಸಾ ತಿಳಿಸಿದೆ.
ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಹಿಂದಿರುಗುವುದು ತಡವಾಗಲಿದೆ. ಅಲ್ಲಿ ಇಬ್ಬರು ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ ಅಂತ ನಾಸಾ ಮಾಹಿತಿ ನೀಡಿದೆ.
ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಗಗನನೌಕೆಯಲ್ಲಿ ಸುನಿತಾ, ಬುಚ್ ಇಬ್ಬರೂ ಜೂನ್ 5ರಂದು ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದರು. ಅನಂತರ ಗಗನನೌಕೆಯಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಭೂಮಿಗೆ ಮರಳಲು ಸಾಧ್ಯವಾಗದೇ ಅಲ್ಲಿಯೇ ಸಿಲುಕಿದ್ದಾರೆ.ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ನೋರ್ ಇಬ್ಬರೂ ಜೂನ್ 5ರಂದು ಬಾಹ್ಯಾಕಾಶಕ್ಕೆ 7 ರಿಂದ 10 ದಿನಗಳ ಕಾರ್ಯಾಚರಣೆಗಾಗಿ ತೆರಳಿದ್ದರು. ಆದರೆ ನೌಕೆ ಬೋಯಿಂಗ್ ಸ್ಟಾರ್ಲೈನರ್ನಲ್ಲಿ ಸುರಕ್ಷತಾ ದೋಷಗಳಿಂದಾಗಿ ಅವರ ಆಗಮನವನ್ನು ಫೆಬ್ರವರಿಗೆ ವಿಸ್ತರಿಸಲಾಗಿತ್ತು. ಇದೀಗ ನಾಸಾ ಮತ್ತೆ ಹೊಸ ದಿನಾಂಕ ಘೋಷಿಸಿದ್ದು ಮಾರ್ಚ್ ಅಥವಾ ಏಪ್ರಿಲ್ ಆರಂಭದಲ್ಲಿ ಹಿಂತಿರುಗುತ್ತಾರೆ ಅಂತ ಹೇಳಿದೆ.