Ad Widget .

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಕರ್ಮಗಳನ್ನು ಆರಂಭಿಸುವ ಮುನ್ನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ರೂಢಿ. ದೈನಂದಿನ ಜೀವನದಲ್ಲಿ ರಾಶಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಇವುಗಳ ಪಾತ್ರ ಮಹತ್ತರವಾದುದು. ಈ ವಾರ‌ ದ್ವಾದಶ ರಾಶಿಗಳ ಗೋಚಾರಫಲ ಏನು? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? ನೋಡೋಣ ಬನ್ನಿ. ಡಿ.22ರಿಂದ 28ರವರೆಗಿನ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ…

Ad Widget .

ಮೇಷರಾಶಿ:
ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.
ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಅತಿಯಾದ ಮಾನಸಿಕ ಒತ್ತಡ ಆರೋಗ್ಯ ಸಮಸ್ಯೆ ಹೆಚ್ಚಿಸುತ್ತದೆ.

Ad Widget . Ad Widget .

ವೃಷಭ ರಾಶಿ:
ವೃತ್ತಿ ಬದುಕು ಹಾಗೂ ಆರ್ಥಿಕ ಬದುಕು ಈ ಅವಧಿಯಲ್ಲಿ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿನ ನಿಮ್ಮ ಪ್ರಯತ್ನಗಳಿಗೆ ಉತ್ತಮ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳಿಗೆ ಈ ಸಮಯದಲ್ಲಿ ಧನ ಲಾಭ ಉಂಟಾಗುವುದು. ಕೆಲಸದಲ್ಲಿನ ಸಮಸ್ಯೆ ಬಗೆಹರಿಯುವುದರಿಂದ ನೀವು ನಿರಾಳವಾಗುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ, ಚಿಕ್ಕ ಆರೋಗ್ಯ ಸಮಸ್ಯೆಯಾದರೂ ನಿರ್ಲಕ್ಷ್ಯ ಮಾಡಬೇಡಿ.

ಮಿಥುನ ರಾಶಿ:
ವೃತ್ತಿ ಬದುಕಿನಲ್ಲಿ ಸವಾಲುಗಳನ್ನು ಎದುರಿಸಬಹುದು, ನೀವು ಯಶಸ್ವಿನ ಕಡೆಗೆ ತುಂಬಾನೇ ಗಮನಹರಿಸಬೇಕು, ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಏನೇ ಸಮಸ್ಯೆಯಿದ್ದರೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಆರ್ಥಿಕ ಸಬಲತೆಗೆ ಸಿಗುವ ಅವಕಾಶಗಳನ್ನು ಮಿಸ್ ಮಾಡದಿರಿ.

ಕರ್ಕಾಟಕ ರಾಶಿ:
ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವೃತ್ತಿ ಜೀವನದಲ್ಲಿ ಬೆಳೆಯಲು ಉತ್ತಮ ಅವಕಾಶ ದೊರೆಯಲಿದೆ. ಆರ್ಥಿಕ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನೀವು ನಿಮ್ಮ ಕಂಫರ್ಟ್‌ ಝೋನ್‌ನಿಂದ ಹೊರಬರಲು ಪ್ರಯತ್ನಿಸಬೇಕು.

ಸಿಂಹ ರಾಶಿ:
ಈ ಅವಧಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಹೂಡಿಕೆ ಸಂಬಂಧಿಸಿದ ನಿರ್ಧಾರಗಳನ್ನು ಮಾಡುವುದಕ್ಕೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು, ವೃತ್ತಿ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದರಿಂದ ಈ ವಾರ ಖುಷಿಯಾಗಿರುತ್ತೀರಿ. ನೀವು ಸಂಬಂಧ ಬಲ ಪಡಿಸಲು ಹೆಚ್ಚಿನ ಪ್ರಯತ್ನ ಮಾಡಬೇಕು. ಸಂಗಾತಿಯ ಬೇಡಿಕೆಗಳ ಕಡೆಗೆ ಗಮನಹರಿಸಬೇಕು.

ಕನ್ಯಾ ರಾಶಿ:
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಬಲವಾಗಲಿದೆ, ಸಣ್ಣ ಪುಟ್ಟ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಿದರೆ ಒಳ್ಳೆಯದು. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ವೃತ್ತಿ ಜೀವನದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಜೀವನ ಚೆನ್ನಾಗಿರಲಿದೆ.

ತುಲಾ ರಾಶಿ:
ಕೆಲಸದಲ್ಲಿನ ಸಮಸ್ಯೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ದೊರೆಯಲಿದೆ, ಈ ಹಿಂದಿಗಿಂತಲೂ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಮಸ್ಯೆ ಬಗೆಹರಿಸಲು ಮೂರನೇಯವರ ಸಲಹೆ ಕೇಳಬೇಡಿ, ನಿಮ್ಮ ಸಮಸ್ಯೆ ಬಗೆಹರಿಸಲು ನೀವೇ ಪ್ರಯತ್ನಿಸಬೇಕು.

ವೃಶ್ಚಿಕ ರಾಶಿ:
ವೃತ್ತಿ ಬದುಕಿನಲ್ಲಿ ತೃಪ್ತಿ ಇರಲ್ಲ, ನೀವು ನಿಮ್ಮ ಕೆಲಸದ ಕಡೆಗೆ ಮತ್ತಷ್ಟು ಗಮನಹರಿಸಬೇಕು, ಕೆಲಸ ಬದಲಾವಣೆಯ ಬಗ್ಗೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಹಣಕಾಸಿನ ವಿಷಯದಲ್ಲಿ ಈ ವಾರ ಅನುಕೂಲಕರವಲ್ಲ, ಬಜೆಟ್‌ ಮೀರಿದ ಖರ್ಚು ಬರಬಹುದು. ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯಗಳು ಬರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ವಿಶ್ರಾಂತಿ ಕಡೆಗೆ ಗಮನಹರಿಸಿ.

ಧನು ರಾಶಿ:
ವೃತ್ತಿ ಬದುಕಿಗೆ ಸಂಬಂಧಿಸಿದ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು ಆವಾಗ ಮಾತ್ರ ಈ ಹಿಂದಿನ ಸಮಸ್ಯೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ನೀವು ಗುರಿಯತ್ತ ಗಮನಹರಿಸಬೇಕು. ಈ ಸಮಯದಲ್ಲಿ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಆರ್ಥಿಕ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕುಟುಂಬದ ಬಗ್ಗೆ ಹೇಳುವುದಾದರೆ ನೀವು ಬೇರೆಯವರು ಏನು ಹೇಳುತ್ತಾರೆ ಎಂಬುವುದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕುಟುಂಬದ ಕಡೆಗೆ ಗಮನಹರಿಸಿ.

ಮಕರ ರಾಶಿ:
ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕು, ಎರಡರ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ವೈಯಕ್ತಿಕ ಬದುಕಿನಲ್ಲಿ ಹೊಂದಾಣಿಕೆ ತುಂಬಾನೇ ಮುಖ್ಯ. ಹಣ ಗಳಿಸಲು ಉತ್ತಮ ಅವಕಾಶ ದೊರೆಯಲಿದೆ, ವೃತ್ತಿ ಬದುಕಿನಲ್ಲಿ ನಿಮಗೆ ಹೊಸ ಅವಕಾಶ ದೊರೆಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ.

ಕುಂಭ ರಾಶಿ:
ನೀವು ವೃತ್ತಿ ಬದುಕಿನಲ್ಲಿ ಗುರಿ ಮುಟ್ಟಲು ಹೆಚ್ಚಿನ ಪ್ರಯತ್ನ ಮಾಡಬೇಕು, ಕೆಲವೊಂದು ಅಡೆತಡೆಗಳು ಉಂಟಾಗಬಹುದು,ಅವುಗಳನ್ನು ಸಮರ್ಥವಾಗಿ ಪರಿಹರಿಸಲು ಪ್ರಯತ್ನಿಸಬೇಕು. ಆರ್ಥಿಕವಾಗಿ ಕೆಲವೊಂದು ಸಮಸ್ಯೆ ಎದುರಾಗಬಹುದು, ಕ್ರಮೇಣ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ.

ಮೀನ ರಾಶಿ:
ಹೊಸ ಉದ್ಯಮ ಪ್ರಾರಂಭಿಸಲು ಬಯಸಿದರೆ ಈ ಅವಧಿ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ನಿಮಗೆ ಉತ್ತಮ ಅವಕಾಶ ದೊರೆಯಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.

Leave a Comment

Your email address will not be published. Required fields are marked *