Ad Widget .

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ.

Ad Widget . Ad Widget .

ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ 440 ಕಿ.ಮೀ, ಒಡಿಶಾದ ಗೋಪಾಲಪುರದ ದಕ್ಷಿಣ-ನೈಋತ್ಯಕ್ಕೆ 600 ಕಿ.ಮೀ. ವ್ಯಾಪ್ತಿಯಲ್ಲಿ ಇರಲಿದೆ. ಬಳಿಕ ಪೂರ್ವ-ಈಶಾನ್ಯಕ್ಕೆ ಚಲಿಸಿ ಅದರ ತೀವ್ರತೆಯನ್ನು ಕಾಪಾಡಿಕೊಳ್ಳಲಿದ್ದು, ನಂತರ ಸಮುದ್ರದಲ್ಲಿ ಕ್ರಮೇಣ ದುರ್ಬಲಗೊಳ್ಳುತ್ತದೆ ಎಂದು ಮಾಹಿತಿ ನೀಡಿದೆ.

Ad Widget . Ad Widget .

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಹಲವು ಕಡೆ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಒಂದು ಕೂಡ ರಾಜ್ಯದಾದ್ಯಂತ ಒಣ ಹವೆ ಜೊತೆಗೆ ಭಾರಿ ಮಳೆಯಾಗಲಿದೆ.

ಡಿಸೆಂಬರ್‌ 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.

ಡಿಸೆಂಬರ್‌ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ ಹಾಗೂ 18 ಡಿಗ್ರಿ ಸೆಲ್ಸಿಯಸ್‌ ಇರಬಹುದು. ಮುಂದಿನ ಎರಡು ದಿನಗಳವರೆಗೂ ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವೇ ಇರಲಿದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ನಷ್ಟು ಕಂಡುಬರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *