Ad Widget .

ಪಡಿತರ ಚೀಟಿ ತಿದ್ದುಪಡಿ/ ಜನವರಿ 31 ರವರೆಗೆ ದಿನಾಂಕ ವಿಸ್ತರಣೆ

ಸಮಗ್ರ ನ್ಯೂಸ್‌: 2024ನೇ ಸಾಲಿನ ಡಿಸೆಂಬರ್‌ 31ರ ವರೆಗೆ ನೀಡಲಾಗಿದ್ದ ಪಡಿತರ ಚೀಟಿ ತಿದ್ದುಪಡಿ ಅವಕಾಶವನ್ನು ಆಹಾರ ಇಲಾಖೆ ಜನವರಿ 31 ರವರೆಗೆ ವಿಸ್ತರಿಸಿದೆ. ರೇಷನ್‌ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ ತಿಂಗಳ 31ರ ವರೆಗೆ ಇರಲಿದೆ.

Ad Widget . Ad Widget .

ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಮತ್ತು ಸ್ವಯಂ ಆಗಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಇರುವವರು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರಿಗೆ ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್‌ಸೈಟ್‌ ಗಮನಿಸಬಹುದಾಗಿದೆ.

Ad Widget . Ad Widget .

ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ: ಪಡಿತರ ಚೀಟಿಯ ಮೂಲ ದಾಖಲೆ, ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್, ಹೆಂಡತಿಯ ಹೆಸರನ್ನು ಸೇರಿಸುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿ ಕಡ್ಡಾಯವಾಗಿರುತ್ತದೆ.

ಆನ್‌ಲೈನ್‌ನಲ್ಲಿ ತಿದ್ದುಪಡಿ ಮಾಡುವುದು ಹೇಗೆ?
ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನ್‌ಲೋಡ್ ಮಾಡಿ.
ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

Leave a Comment

Your email address will not be published. Required fields are marked *