ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರದ ಶಾಕ್ ಜನತೆಗೆ ಉಂಟಾಗಲಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ.