ಸಮಗ್ರ ನ್ಯೂಸ್: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರುಮಾಡಿದ್ದಾರೆ.
ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೆ ತಲೆಮರೆಸಿಕೊಂಡ ಡಿವೈಎಸ್ ಪಿ ರಾಮಚಂದ್ರಪ್ಪ.ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ಧಾರೆ.