ದಕ್ಷಿಣ ಕನ್ನಡ ಗಡಿಯಲ್ಲಿ ಆಗಸ್ಟ್ 30ರ ವರೆಗೂ ಮದ್ಯದಂಗಡಿಗಳು ಬಂದ್-ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸದ್ಯ ಗಡಿಯಲ್ಲಿರುವ ಮದ್ಯದಂಗಡಿಗಳನ್ನು ಆಗಸ್ಟ್ 30ರ ತನಕ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

Ad Widget ... ..

ನೆರೆಯ ಕೇರಳ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಭಿಸಿದ್ದು ಇದರಿಂದ ಕೋವಿಡ್ ಹರಡುವ ಸಾಧ್ಯತೆ ಹೆಚ್ಚಾಗಿದೆ.

Ad Widget

ಈ ಹಿನ್ನಲೆಯಲ್ಲಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿದೆ.

Leave a Comment

Your email address will not be published. Required fields are marked *