ಸಮಗ್ರ ನ್ಯೂಸ್ : ಹಾಸನದ ಮಾಜಿ ಸಂಸದ ಹಾಗೂ ಭವಾನಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ, ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರ ಅರ್ಜಿ ವಿಚಾರಣೆ ಹೈಕೋರ್ಟ್ ಇಂದು ನಡೆಸಿ ಫೆ.7ಕ್ಕೆ ಮುಂದೂಡಿದೆ.
ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಅಂತಿಮವಾಗಿ ನಿರ್ಧರಿಸಲು ಅರ್ಜಿ ವಿಚಾರಣೆ ಫೆ.7ಕ್ಕೆ ಮುಂದೂಡಿದ್ದು, ಭವಾನಿ ರೇವಣ್ಣಗೆ ಸದ್ಯ ಟೆನ್ನನ್ ಮುಂದುವರಿದಂತಿದೆ.ಈಗಾಗಲೇ ಪುತ್ರ ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆರೋಪ ನಿಗದಿ ಮಾಡದಂತೆ ಸದ್ಯಕ್ಕೆ ತಡೆ ನೀಡಿದೆ. ಪ್ರಜ್ವಲ್ ರೇವಣ್ಣ ಅತ್ಯಾಚಾರ ಕೇಸಿಗೆ ಸಂಬಂಧಿಸಿದ ಕೆ.ಆರ್.ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ತನ್ನ ಹೆಸರು ಕೈಬಿಡುವಂತೆ ಭವಾನಿ ರೇವಣ್ಣ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ಕುರಿತು ಅಂತಿಮ ವಾದ-ಪ್ರತಿವಾದ ಆಲಿಸಲು ಕೋರ್ಟ್ ದಿನಾಂಕ ನಿಗದಿ ಮಾಡಿದೆ.