ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಯಾರ್ ಪ್ರಚಾರಕರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸ್ಟಾರ್ ಪ್ರಚಾರಕರಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಶಿವರಾಜ್ ಸಿಂಗ್ ಚೌಹಾಣ್, ನಿತಿನ್ ಗಡ್ಕರಿ, ಮನೋಹರಲಾಲ್ ಖಟ್ಟರ್ ಧರ್ಮೇಂದ್ರ ಪ್ರಧಾನ್, ಸರ್ದಾರ್ ಹರ್ದೀಪ್ ಸಿಂಗ್ ಪುರಿ ಮತ್ತು ಗಿರಿರಾಜ್ ಸಿಂಗ್ ಸೇರಿದ್ದಾರೆ.
ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಹಿಮಂತ ಬಿಸ್ಮಾ ಶರ್ಮಾ, ಮೋಹನ್ ಯಾದವ್, ಪುಷ್ಕರ್ ಸಿಂಗ್ ಧಾಮಿ, ಭಜನ್ ಲಾಲ್ ಶರ್ಮಾ ಮತ್ತು ನಯಾಬ್ ಸಿಂಗ್ ಸೈನಿ ಕೂಡ ಪಟ್ಟಿಯಲ್ಲಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಆಡಳಿತಾರೂಢ ಆಮ್ ಆದ್ಮ ಪಕ್ಷದ ನಡುವೆ ಹೋರಾಟ ತೀವ್ರಗೊಂಡಿದೆ.